80ರ ದಶಕದ ಫೋಟೋಗಳ (80s Photo) ಮಾದರಿಯಲ್ಲಿ ತಮ್ಮ ಫೋಟೋಗಳನ್ನ ಎಡಿಟ್ ಮಾಡಿಸಿಕೊಳ್ಳಲು ಸಾರ್ವಜನಿಕರು ವಿವಿಧ ಆ್ಯಪ್ಗಳು ಹಾಗೂ ಆನ್ಲೈನ್ ಲಿಂಕ್ಗಳನ್ನು ಬಳಸುತ್ತಿದ್ದಾರೆ. ಆದರೆ, ಇಂತಹ ಸಂದರ್ಭದಲ್ಲಿ ಅಪರಿಚಿತ ಆ್ಯಪ್ಗಳನ್ನು ಡೌನ್ಲೋಡ್ ಮಾಡುವುದು ಅಥವಾ ಅನುಮಾನಾಸ್ಪದ ಲಿಂಕ್ಗಳನ್ನು ತೆರೆಯುವುದರಿಂದ ಸೈಬರ್ ವಂಚನೆಗೆ ಒಳಗಾಗುವ ಸಾಧ್ಯತೆ ಇದೆ ಎಂದು ಪೊಲೀಸರು ಎಚ್ಚರಿಸಿದ್ದಾರೆ.
ದಾಖಲೆಗಳ ವಿವರ ಕೇಳಬಹುದು
ಫೋಟೋ ಎಡಿಟಿಂಗ್ ಅಥವಾ ಹೊಸ ಮಾದರಿಯ ಫೋಟೋ ಸೃಷ್ಟಿಸುವ ನೆಪದಲ್ಲಿ ಕೆಲವರು ವೈಯಕ್ತಿಕ ಮಾಹಿತಿ ಹಾಗೂ ದಾಖಲೆಗಳ ವಿವರ ಕೇಳುವ ಸಾಧ್ಯತೆ ಇದೆ. ಪಾಸ್ವರ್ಡ್, ಬ್ಯಾಂಕ್ ಖಾತೆ ಸೇರಿದಂತೆ ಯಾವುದೇ ಸೂಕ್ಷ್ಮ ಮಾಹಿತಿಯನ್ನ ಅಪರಿಚಿತ ವ್ಯಕ್ತಿಗಳು ಅಥವಾ ಆ್ಯಪ್ಗಳೊಂದಿಗೆ ಹಂಚಿಕೊಳ್ಳಬಾರದು ಎಂದು ಪೊಲೀಸರು ಸಲಹೆ ನೀಡಿದ್ದಾರೆ.
ಅಪರಿಚಿತ ಆ್ಯಪ್ಗಳನ್ನ ಇನ್ಸ್ಟಾಲ್ ಮಾಡದಂತೆ ಹಾಗೂ ಅನುಮಾನಾಸ್ಪದ ಲಿಂಕ್ಗಳ ಮೇಲೆ ಕ್ಲಿಕ್ ಮಾಡದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಯಾವುದೇ ಆನ್ಲೈನ್ ಸೇವೆ ಬಳಸುವ ಮುನ್ನ ಅದರ ವಿಶ್ವಾಸಾರ್ಹತೆ ಪರಿಶೀಲಿಸುವಂತೆ ಪೊಲೀಸರು ತಿಳಿವಳಿಕೆ ನೀಡಿದ್ದಾರೆ.
ಸೈಬರ್ ವಂಚಕರ ಹಾವಳಿ ಹೆಚ್ಚಾಗುವ ಸಾಧ್ಯತೆ
ಟ್ರೆಂಡಿಂಗ್ ವಿಷಯಗಳನ್ನು ಬಳಸಿಕೊಂಡು ಸೈಬರ್ ವಂಚಕರು ಜನರನ್ನು ಸೆಳೆಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹೆಚ್ಚಿನ ಜಾಗ್ರತೆ ವಹಿಸಬೇಕು. ವೈಯಕ್ತಿಕ ಮಾಹಿತಿ ಸೋರಿಕೆಯಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಹುಬ್ಬಳ್ಳಿ ಧಾರವಾಡ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಸೈಬರ್ ಸುರಕ್ಷತೆ ಕುರಿತು ಜಾಗೃತಿ ಮೂಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಟ್ರೆಂಡಿಂಗ್ ವಿಷಯ ಕಂಡುಬಂದರೂ ಅದರ ಹಿಂದೆ ಇರುವ ಲಿಂಕ್, ಆ್ಯಪ್ ಅಥವಾ ವ್ಯಕ್ತಿಯ ವಿಶ್ವಾಸಾರ್ಹತೆಯನ್ನು ಪರಿಶೀಲಿಸದೆ ವೈಯಕ್ತಿಕ ಮಾಹಿತಿಯನ್ನು ನೀಡದಂತೆ ಮನವಿ ಮಾಡಿದ್ದಾರೆ.
Comments (0)