ಹುಬ್ಬಳ್ಳಿ, ಆಗಸ್ಟ್ 29, 2026: ಹುಬ್ಬಳ್ಳಿ-ಧಾರವಾಡ ಮಹಾನಗರದ ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿಕುಮಾರ್ ಅವರನ್ನು ಕರ್ನಾಟಕ ಸರ್ಕಾರ ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ಐಪಿಎಸ್ ಅಧಿಕಾರಿ ಭೂಷಣ್ ಗುಲಾಬ್ರಾವ್  ಅವರನ್ನು ನೂತನ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಿದೆ.

ಸರ್ಕಾರದ ಇತ್ತೀಚಿನ ವರ್ಗಾವಣೆ ಆದೇಶದಂತೆ ಈ ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬರಲಿದೆ. 

ಇದರೊಂದಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್‌ಗೆ ಹೊಸ ನಾಯಕತ್ವ ದೊರೆತಂತಾಗಿದೆ