ಎರ್ಟಿಗಾ ಕಾರು ಬೆಳಗಾವಿಯಿಂದ ಧಾರವಾಡದತ್ತ ಬರುತ್ತಿತ್ತು. ಈ ವೇಳೆ ಕಾರಿನ ಮುಂದೆ ಸಾಗುತ್ತಿದ್ದ ಟ್ರಕ್‌ವೊಂದನ್ನು ತಪ್ಪಿಸಲು ಚಾಲಕ ಯತ್ನಿಸಿದ್ದು, ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕದ ಮೇಲೆ ಹತ್ತಿ ಬಳಿಕ ರಸ್ತೆಯಲ್ಲೇ ಪಲ್ಟಿಯಾಗಿದೆ ಎನ್ನಲಾಗಿದೆ.

ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಮಂಜುನಾಥ (29), ವಿನಾಯಕ (27) ಹಾಗೂ ಬಸವರಾಜ (33) ಎಂಬ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಹರಿಹರ ಮೂಲದವರಾಗಿದ್ದು, ಧಾರವಾಡದಲ್ಲಿ ಕ್ಯಾಟರಿಂಗ್ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಕಾರು ಚಾಲಕ ಸೇರಿದಂತೆ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳನ್ನ ಹೊಸಯಲ್ಲಾಪುರದ ಬಸನಗೌಡ ಯಲ್ಲಪ್ಪಗೌಡ ಪಾಟೀಲ (26), ದಾವಣಗೆರೆಯ ಅಭಿಷೇಕ್ ಮಂಜಪ್ಪ ಕೆ.ಆರ್. (30) ಹಾಗೂ ಅಜಯ್ ಮಂಜಪ್ಪ ಕೆ.ಆರ್. (26) ಎಂದು ಗುರುತಿಸಲಾಗಿದೆ.