ಹುಬ್ಬಳ್ಳಿ: ನಗರದ ಪ್ರಮುಖ ಪ್ರದೇಶವಾದ ದುರ್ಗದ ಬೈಲ್ ಸಮೀಪ ಹಬ್ಬದ ನಿಮಿತ್ತ ತೇರು ಎಳೆಯುವ ಸಂದರ್ಭದಲ್ಲಿ ವಿದ್ಯುತ್ ಕಂಬವೊಂದು ನೆಲಕ್ಕುರುಳಿದ ಘಟನೆ ನಡೆದಿದೆ.
ಹಬ್ಬದ ಸಂಭ್ರಮದ ನಡುವೆ ವಿದ್ಯುತ್ ಕಂಬ ನೆಲಕ್ಕುರುಳಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಎನ್ನಲಾಗಿದೆ.
ಸದ್ಯದ ಮಾಹಿತಿ ಪ್ರಕಾರ, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Comments (0)