2026ರ ಏಷ್ಯನ್ ಗೇಮ್ಸ್ ಪಂದ್ಯಾವಳಿಯಲ್ಲಿ ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ವಿ.ವಿ.ಎಸ್. ಲಕ್ಷ್ಮಣ್ ಕಾರ್ಯನಿರ್ವಹಿಸಲಿದ್ದಾರೆ. ಜಪಾನ್ನ ಐಚಿ-ನಗೋಯಾದಲ್ಲಿ ನಡೆಯಲಿರುವ ಈ ಪ್ರತಿಷ್ಠಿತ ಕ್ರೀಡಾಕೂಟಕ್ಕೆ ಭಾರತೀಯ ಕ್ರೀಡಾ ಸಚಿವಾಲಯವು ಅಧಿಕೃತ ಅನುಮೋದನೆ ನೀಡಿದ್ದು, ಅದರಂತೆ ಲಕ್ಷ್ಮಣ್ ನೇತೃತ್ವದಲ್ಲಿ ಟೀಮ್ ಇಂಡಿಯಾ ಏಷ್ಯನ್ ಗೇಮ್ಸ್ಗಾಗಿ ತೆರಳಲಿದೆ.
ಭಾರತೀಯ ಹಿರಿಯ ಕ್ರಿಕೆಟ್ ತಂಡದ ನಿಯಮಿತ ಮುಖ್ಯ ಕೋಚ್ ಆಗಿರುವ ಗೌತಮ್ ಗಂಭೀರ್ ಅವರು ಇದೇ ಅವಧಿಯಲ್ಲಿ ತಾಯ್ನಾಡಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಸರಣಿಯಲ್ಲಿ ನಿರತರಾಗಿರಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಸ್ಪ್ಲಿಟ್ ಕೋಚಿಂಗ್ ಮಾದರಿಯನ್ನು ಅನುಸರಿಸಿದ್ದು, ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (NCA) ಮುಖ್ಯಸ್ಥರಾಗಿರುವ ವಿ.ವಿ.ಎಸ್. ಲಕ್ಷ್ಮಣ್ ಅವರಿಗೆ ಏಷ್ಯನ್ ಗೇಮ್ಸ್ನ ಜವಾಬ್ದಾರಿಯನ್ನು ವಹಿಸಿದೆ.
ವಿ.ವಿ.ಎಸ್. ಲಕ್ಷ್ಮಣ್ ಅವರೊಂದಿಗೆ ಮಾಜಿ ಕ್ರಿಕೆಟಿಗರುಗಳಾದ ಹೃಷಿಕೇಶ್ ಕಾನಿಟ್ಕರ್ (ಬ್ಯಾಟಿಂಗ್ ಕೋಚ್) ಹಾಗೂ ಸುನಿಲ್ ಜೋಶಿ (ಬೌಲಿಂಗ್ ಕೋಚ್) ಅವರನ್ನು ಸಹಾಯಕ ಸಿಬ್ಬಂದಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಏಷ್ಯನ್ ಗೇಮ್ಸ್ಗೆ ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪಾನಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಜಸ್ಪ್ರೀತ್ ಬುಮ್ರಾ ಬುಮ್ರಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ವೈಭವ್ ಸೂರ್ಯವಂಶಿ.
Comments (0)