ಕರ್ನಾಟಕ ರಾಜ್ಯದ ಎಡಿಜಿಪಿ ಕಾನೂನು ಮತ್ತು ಸುವ್ಯವಸ್ಥೆ ಆರ್. ಹಿತೇಂದ್ರ IPS ಅವರು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ಕಚೇರಿಗೆ ಭೇಟಿ ನೀಡಿ, ಮುಂಬರುವ ಗಣೇಶೋತ್ಸವದ ಬಂದೋಬಸ್ತ್ ಸಿದ್ಧತೆಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಪಿಐ ಹಾಗೂ ಮೇಲ್ದರ್ಜೆಯ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಗಣೇಶೋತ್ಸವವನ್ನು ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಪರಿಣಾಮಕಾರಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಂತರ ಅವರು ಹುಬ್ಬಳ್ಳಿ ಶಹರ ಹಾಗೂ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ, ಅಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಸಂವಾದ ನಡೆಸಿ, ಗಣೇಶೋತ್ಸವ ಬಂದೋಬಸ್ತ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಅಗತ್ಯ ಸೂಚನೆಗಳನ್ನು ನೀಡಿದರು.