ಹುಬ್ಬಳ್ಳಿ (ಕರ್ನಾಟಕ ವಾರ್ತೆ ) : ಸೆಪ್ಟೆಂಬರ್ ೧೪ ರಂದು ಶ್ರೀ ಗಣೇಶ ಚತುರ್ಥಿ ಇರುವುದರಿಂದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಹುಬ್ಬಳ್ಳಿ ಹಾಗೂ ಧಾರವಾಡ ವಧಾಲಯಗಳು ಹಾಗೂ ಎಲ್ಲ ಮಾಂಸ ಮಾರಾಟ ಮಾಡುವ ವ್ಯಾಪಾರಸ್ಥರು ತಮ್ಮ ಮಾಂಸದ ಅಂಗಡಿಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ. ಯಾರಾದರೂ ಮಾಂಸದ ಅಂಗಡಿಗಳನ್ನು ತೆಗೆದಲ್ಲಿ ಪಾಲಿಕೆಯಿಂದ ಅವರ ಲೈಸನ್ಸನ್ನು ರದ್ದುಪಡಿಸಿ ಸರಕಾರದ ನಿಯಮಗಳನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.