ಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ಈಗ ಮತ್ತೊಂದು ಹೊಸ ಆತಂಕ ಶುರುವಾಗಿದೆ. ಮುಂಜಾನೆ 5 ಗಂಟೆಯ ಚಳಿಯಲ್ಲೂ ಹಳ್ಳಿ-ನಗರ ಎನ್ನದೆ ನ್ಯಾಯಬೆಲೆ ಅಂಗಡಿಗಳ ಮುಂದೆ ವೃದ್ಧರು, ಮಹಿಳೆಯರು ಮತ್ತು ಪುಟ್ಟ ಮಕ್ಕಳ ಸಹಿತ ಜನ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಹಾರ ಇಲಾಖೆಯು ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬ ಸದಸ್ಯರಿಗೂ ಇದೇ ಸೆಪ್ಟೆಂಬರ್ 30ರ ಒಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯ ಎಂದು ಡೆಡ್ಲೈನ್ ವಿಧಿಸಿದೆ. ಆದ್ರೆ, ಸರ್ವರ್ ಸಮಸ್ಯೆ ಇದೆ. ಹೀಗಾಗಿ ಜನರು ಆತಂಕಗೊಂಡಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಪರಮೇಶ್ವರ್, ರೇಷನ್ ಕಾರ್ಡ್ ಇ-ಕೆವೈಸಿ ವೇಳೆ ತಾಂತ್ರಿಕ ಸಮಸ್ಯೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇವೆ. ಸದ್ಯ ಸರಣಿ ರಜೆ ಬಂದಿದೆ, ತಾಂತ್ರಿಕ ಸಮಸ್ಯೆ ಬಗ್ಗೆ ಚರ್ಚಿಸುತ್ತೇವೆ. ತಾಂತ್ರಿಕ ಸಮಸ್ಯೆ ಇದ್ದರೆ ದಿನಾಂಕ ವಿಸ್ತರಣೆ ಮಾಡೋ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
Comments (0)