ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯ ಗಿರಣಿ ಚಾಳದ ಹತ್ತಿರವಿರುವ ಶಾಲೆಯೊಂದರ ಬಳಿ ಇಂದು ಖಾಸಗಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋವೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಅದೃಷ್ಟವಶಾತ್ ಆಟೋದಲ್ಲಿದ್ದ ಖಾಸಗಿ ಶಾಲೆಯ ಎಲ್ಲಾ ಮಕ್ಕಳು ಯಾವುದೇ ಪ್ರಾಣಾಪಾಯವಿಲ್ಲದೆ ಸಂಪೂರ್ಣ ಕ್ಷೇಮವಾಗಿದ್ದಾರೆ. ಆದರೆ ಅಪಘಾತದ ರಭಸಕ್ಕೆ ಆಟೋ ಚಾಲಕನಿಗೆ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Comments (0)