ಬೆಂಗಳೂರು/ಗದಗ, : ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ಕೆ. ಪಾಟೀಲ್ ಅವರ ರಾಜೀನಾಮೆ ಎಚ್ಚರಿಕೆಗೆ ಮಣಿದ ಕರ್ನಾಟಕ ರಾಜ್ಯ ಸರ್ಕಾರ ಕೊನೆಗೂ ಗದಗ ಜಿಲ್ಲೆಯ ಮೂರು ತಾಲೂಕು ಬರ ಪಟ್ಟಿಗೆ ಸೇರ್ಪಡೆ ಮಾಡಿದೆ. ಗದಗ, ಮುಂಡರಗಿ, ರೋಣ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ. ಗ್ರೌಂಡ್ ಟ್ರುತನಿಂಗ್ ಆಧರಿಸಿ ಬರ ಪೀಡಿತ ತಾಲೂಕು ಎಂದು ಘೋಷಣೆಗೆ ಅರ್ಹ ತಾಲೂಕುಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಈ ಪೈಕಿ ಕನಕಪುರ ತಾಲೂಕು ‘ತೀವ್ರ ಸ್ವರೂಪದ’ ಬರದ ಪಟ್ಟಿಗೆ ಸೇರ್ಪಡೆಯಾಗಿದೆ. ಗದಗ ಜಿಲ್ಲೆಯ ಮೂರು ತಾಲೂಕುಗಳನ್ನು ಸಾಮಾನ್ಯ ಬರದ ಪಟ್ಟಿಗೆ ಸೇರಿಸಲಾಗಿದೆ.
ಸೆಪ್ಟಂಬರ್ 20ರಂದು ದಗ ತಾಲೂಕಿನ ಮುಳಗುಂದ ಪಟ್ಟಣದಲ್ಲಿ ನಡೆದ ರೈತರ ಹೋರಾಟದಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ಶಾಸಕ ಹೆಚ್.ಕೆ. ಪಾಟೀಲ್, ಬರ ಘೋಷಣೆ ಸಂಬಂಧ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಅಕ್ಟೋಬರ್ 10ರವರೆಗೆ ರಾಜ್ಯ ಸರ್ಕಾರಕ್ಕೆ ಗಡುವು ಕೊಡುತ್ತೇನೆ. ಅಷ್ಟರೊಳಗೆ ಬರಪೀಡಿತ ತಾಲೂಕು ಎಂದು ಗದಗವನ್ನು ಘೋಷಣೆ ಮಾಡದಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡೋದಾಗಿ ಅವರು ಹೇಳಿದ್ದರು. ಆ ಬೆನ್ನಲ್ಲೇ ಸರ್ಕಾರವೀಗ ಗದಗದ ಮೂರು ತಾಲುಕೂಗಳನ್ನು ಬರ ಪಟ್ಟಿಗೆ ಸೇರಿಸಿರುವ ಕಾರಣ ಅನ್ನದಾತರು ನಿಟ್ಟುಸಿರು ಬಿಟ್ಟಿದ್ದಾರೆ.
https://x.com/DrParameshwara/status/2102397259489104068?s=20
ಕೇಂದ್ರ ಸರ್ಕಾರವು 2020ರಲ್ಲಿ ರೂಪಿಸಿರುವ ಬರ ಘೋಷಣೆಯ ಮಾರ್ಗಸೂಚಿಗಳ ಪ್ರಕಾರವೇ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕಾಗುತ್ತದೆ. ಆ ಮಾನದಂಡಗಳನ್ನು ಅನುಸರಿಸಿ ಮೊದಲ ಹಂತದಲ್ಲಿ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ನಿರಂತರ ಪರಿಶೀಲನೆಯ ಬಳಿಕ ಮತ್ತೂ 23 ತಾಲೂಕುಗಳನ್ನು ಸೇರ್ಪಡೆ ಮಾಡಲಾಗಿದ್ದು, ಇದೀಗ ಮತ್ತೆ 53 ತಾಲೂಕುಗಳನ್ನು ಪಟ್ಟಿಗೆ ಸೇರಿಸಲಾಗುತ್ತಿದೆ. ಇದರೊಂದಿಗೆ ಒಟ್ಟು 177 ತಾಲೂಕುಗಳು ಬರಪೀಡಿತ ಪ್ರದೇಶಗಳಾಗಿ ಘೋಷಣೆಯಾಗಲಿವೆ ಎಂದು ಡಿಸಿಎಂ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಇಷ್ಟಕ್ಕೇ ಪ್ರಕ್ರಿಯೆ ಮುಗಿಯುವುದಿಲ್ಲ. ನೆಲಮಟ್ಟದ ಪರಿಸ್ಥಿತಿ, ಮಳೆ ಕೊರತೆ, ಬೆಳೆ ಹಾನಿ ಸೇರಿದಂತೆ ನಿಗದಿತ ಮಾನದಂಡಗಳ ಆಧಾರದಲ್ಲಿ ನಿರಂತರ ಮೌಲ್ಯಮಾಪನ ನಡೆಸಲಾಗುವುದು. ಮುಂದಿನ ಹಂತದಲ್ಲಿ ಮತ್ತಷ್ಟು ತಾಲೂಕುಗಳು ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆಯಿದ್ದು, ಬರಪೀಡಿತ ತಾಲೂಕುಗಳ ಸಂಖ್ಯೆ ಸುಮಾರು 200ರ ವರೆಗೆ ತಲುಪಬಹುದು ಎಂದವರು ತಿಳಿಸಿದ್ದರು. ಆ ಬೆನ್ನಲ್ಲೇ ಮತ್ತೆ 11 ತಾಲೂಕುಗಳನ್ನು ಬರ ಪಟ್ಟಿಗೆ ಸೇರಿಸಲಾಗಿದ್ದು, ಒಟ್ಟು ಸಂಖ್ಯೆ 188ಕ್ಕೆ ಏರಿಕೆಯಾಗಿದೆ.
Comments (0)