ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯ 12 ಹಾಸಿಗೆಗಳ ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿ ನಡೆಯುತ್ತಿದ್ದು, ಆಸ್ಪತ್ರೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಭರವಸೆ ನೀಡಿದ್ದಾರೆ.

ನಿರ್ಮಾಣ ಹಂತದಲ್ಲಿರುವ ಆಸ್ಪತ್ರೆಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ ಸಚಿವರು, ಶಾಸಕ ಪ್ರಸಾದ ಅಬ್ಬಯ್ಯ ಅವರ ದೂರದೃಷ್ಟಿಯ ಯೋಜನೆಗೆ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದರು.

ಆಸ್ಪತ್ರೆ ಆರಂಭಕ್ಕೆ ಅಗತ್ಯವಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಪೀಠೋಪಕರಣಗಳು ಹಾಗೂ ಮೂಲಸೌಕರ್ಯಗಳನ್ನು ಒದಗಿಸುವುದಾಗಿ ಸಚಿವರು ತಿಳಿಸಿದರು. ಈ ಕುರಿತು ಹಣಕಾಸು ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳೊಂದಿಗೆ ಸಭೆ ನಡೆಸಿ, ಆರೋಗ್ಯ ಇಲಾಖೆಗೆ ಹಸ್ತಾಂತರಿಸುವ ಪ್ರಕ್ರಿಯೆ ಶೀಘ್ರ ಆರಂಭಿಸಲಾಗುವುದು ಎಂದರು.